Categories: ವಿದೇಶ

PM Modi: ಸಿಡ್ನಿಯಲ್ಲಿ ಮೋದಿ ಸ್ವಾಗತಕ್ಕೆ ಯಕ್ಷಗಾನದ ಸೊಬಗು

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 23ರಂದು ಸಿಡ್ನಿಯಲ್ಲಿ ಭಾರತೀಯ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಗ ಮೋದಿಯವರನ್ನು ಸ್ವಾಗತಿಸಲು ನಡೆಯಲಿರುವ ವಿಶೇಷ ನೃತ್ಯ ಕಾರ್ಯಕ್ರಮವೊಂದು ಮಂಗಳೂರು ಮೂಲದವರಿಂದ ಸಿದ್ಧಗೊಂಡಿದೆ ಎಂದು ವರದಿ ತಿಳಿಸಿದೆ.

ಮಂಗಳೂರು ಮೂಲದ ವಿದುಷಿ ಪಲ್ಲವಿ ಭಾಗವತ್‌ ಅವರು ತಮ್ಮ ನೃತ್ಯ ಸಂಸ್ಥೆ “ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ “ಕಾಂತಾರ’ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಕರ್ನಾಟಕದ ಹಳ್ಳಿಯ ಸೊಬಗನ್ನು ತೋರಿಸುವ ಜಾನಪದ ನೃತ್ಯ ಹಾಗೂ ಯಕ್ಷಗಾನದ ಸೊಬಗನ್ನು ಅಳವಡಿಸಿದ ಈ ನೃತ್ಯದಲ್ಲಿ ಮಂಗಳೂರು, ಉಡುಪಿ ಸಹಿತ ದೇಶ-ವಿದೇಶದ ಶಿಷ್ಯ ವೃಂದ ಪಾಲ್ಗೊಳ್ಳಲಿದೆ ಎಂದು ಮಾಹಿತಿ ದೊರೆತಿದೆ.

ಶ್ರೀ ನಾಟ್ಯನಿಲಯಂ ಮಂಜೇಶ್ವರ ಹಾಗೂ ಕರ್ನಾಟಕ ಕಲಾಶ್ರೀ ವಿದುಷಿ ಕಮಲಾ ಭಟ್‌ ಬಳಿ ತಮ್ಮ ಭರತನಾಟ್ಯ ವಿದ್ವತ್‌ ಪೂರೈಸಿರುವ ಪಲ್ಲವಿ ಅವರು ಐಟಿಯಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ಭಾರತನಾಟ್ಯ ಸಂಸ್ಥೆಯನ್ನು ಹಲವು ವರ್ಷಗಳಿಂದ ಸಿಡ್ನಿಯಲ್ಲಿ ನಡೆಸುತ್ತಿದ್ದಾರೆ. ದ.ಕ., ಉಡುಪಿಯ ಆಶ್ವಿ‌ಕಾ ರಾವ್‌, ವಾದಿರಾಜ್‌ ರಾವ್‌, ಗೌತಮ್‌, ಅನಿಶಾ ಪೂಜಾರಿ ಸಹಿತ ಕಲಾವಿದರು ನೃತ್ಯದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Gayathri SG

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ: ಮಲ್ಲಪ್ಪ ಸಾಲಿ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

13 mins ago

ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು

ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಸಾಕಷ್ಟು ಲಾಭಗಳೂ ಇವೆ. ಈ ಬೇಸಗೆಯಲ್ಲಂತೂ ಆಗಾಗ ಸಲಾಡ್‌ಗಳ ರೂಪದಲ್ಲಾದರೂ ಹಸಿ ಈರುಳ್ಳಿ ಬಳಸಬೇಕು.

27 mins ago

ಗಂಡನಿಂದಲೇ ಯುವತಿಯ ಮೇಲೆ ಅತ್ಯಾಚಾರ ಮಾಡಿಸಿ 10 ಸಾವಿರ ರೂ. ಡಿಮ್ಯಾಂಡ್‌ ಮಾಡಿದ ದಂಪತಿ

ಈವೆಂಟ್ ಮ್ಯಾನೆಜ್​ಮೆಂಟ್ ಮಾಡುವ ಯುವತಿಗೆ ಮತ್ತು ಬರುವ ಪಾನೀಯ ಕೊಟ್ಟು ಗಂಡನಿಂದ ಅತ್ಯಾಚಾರ ಮಾಡಿಸಿದ್ದ ಬ್ಯೂಟಿಷಿಯನ್​ ಮಹಿಳೆಯನ್ನು ಪೊಲೀಸರು ಬಂಧಿಸಿರುವ…

48 mins ago

ಚಲಿಸುತ್ತಿದ್ದ ಬಸ್​ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಚಲಿಸುತ್ತಿದ್ದ ಬಸ್​ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ  ಘಟನೆ ಮೈಸೂರಿನಲ್ಲಿ ನಡೆದಿದೆ.

1 hour ago

ದಲಿತ ಯುವತಿಯ ಮೇಲೆ ಅನ್ಯಕೋಮಿನ ಯುವಕ ಅತ್ಯಾಚಾರ : ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…

1 hour ago

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago