ಕೆಲವರಿಗೆ ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ಕ್ಲಿಕ್ಕಿಸುವ ಹುಚ್ಚಿರುತ್ತದೆ ಆದರೆ ಅದು ಅವರ ಅಂತ್ಯಕ್ಕೂ ಕಾರಣ ವಾಗಬಹುದು. ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಸೆಫ್ಲಿ ಕ್ಲಿಕ್ಕಿಸುವ ಹವ್ಯಾಸ ಹೊಂದಿದ್ದಾರೆ. ಅದರಲ್ಲೂ ಸುಂದರ ತಾಣಗಳಿಗೆ ಭೇಟಿ ನೀಡಿ ಅಲ್ಲಿ ಸುಂದರ ಕ್ಷಣಗಳನ್ನು ಸೆರೆ ಹಿಡಿಯಲು ಸೆಲ್ಫಿ ತೆಗೆದುಕೊಳ್ಳುತ್ತಾರೆ.ಈ ರೀತಿಯ ನಿದರ್ಶನಗಳು ಕಣ್ಣ ಮುಂದೆ ಇದ್ರೂ ಕೂಡಾ ಈ ಕೆಲವೊಬ್ರು ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ಕ್ಲಿಕ್ಕಿಸುವ, ರೀಲ್ಸ್‌ ಮಾಡುವ ಸಾಹಸಕ್ಕೆ ಕೈ ಹಾಕುತ್ತಾರೆ.

ಇದೀಗ ಅಂತಹದ್ದೇ ಒಂದು ಘಟನೆ ನಡೆದಿದ್ದು ಯುವತಿಯೊಬ್ಬಳು  ಎತ್ತರದ ಪರ್ತತದ ಅಂಚಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಆಯತಪ್ಪಿ 262 ಅಡಿ ಆಳದ ಕಂದಕಕ್ಕೆ ಬಿದ್ದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಈ ಸುದ್ದಿ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿಗೆ ಬಲವಾದ ಪೆಟ್ಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ಕುರಿತ ಪೋಸ್ಟ್‌ ಒಂದನ್ನು True Crime Updates ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ಸ್ಟಾರ್‌ ಜಿಮ್ನಾಸ್ಟ್‌ ನಟಾಲಿ ಸ್ಟಿಚೋವಾ ದುರಂತ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.