Showing 20 of 579 posts • Page 2 of 29
ಇರಾನ್ ಮೇಲೆ ಅಮೆರಿಕ ಮತ್ತೆ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯಲ್ಲಿರುವ ಲಾರಕ್ ದ್ವೀಪದಲ್ಲಿ ಅಮೆರಿಕ ಇರಾನಿನ ಎರಡು ಉಡಾವಣಾ ವ್ಯವಸ್ಥೆಗಳನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.
ಉಕ್ರೇನ್–ರಷ್ಯಾ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಶನಿವಾರ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ, ಉಕ್ರೇನ್ ರಾಜಧಾನಿ ಕೀವ್ಗೆ ಸಮೀಪದ ಬುಚಾ ಜಿಲ್ಲೆಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಗುರುಪ್ರೀತ್ ಸಿಂಗ್ ಗೋಪಿ ಅವರನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬೈಕ್ ನಲ್ಲಿ ಬೆನ್ನಟ್ಟಿ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮಮ್ಡೋಟ್ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಜ್ಬೇಕಿಸ್ತಾನ್ಗೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನ್ನ ರಾಜಧಾನಿ ತಾಷ್ಕೆಂಟ್ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಚೀನಾ-ನೇಪಾಳ ಗಡಿಯಲ್ಲಿರುವ ಟಿಬೆಟ್ನ ಗೈರಾಂಗ್ ಭೂ ಬಂದರು ಪ್ರದೇಶದಲ್ಲಿ ಭಾರೀ ಭೂಕುಸಿತ ಮತ್ತು ಹಿಮಕುಸಿತ ಸಂಭವಿಸಿದೆ.
ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಉಕ್ರೇನ್ನ ರಾಜಧಾನಿ ಕೀವ್ ಮೇಲೆ ರಾತ್ರಿ ಪೂರ್ತಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ.
ನೇಪಾಳದ ರುಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ, ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಮಾಹಿತಿ ನೀಡಿದ್ದಾರೆ.
ಅಮೆರಿಕದ ಟ್ರಂಪ್ ಆಡಳಿತವು ಜಾಗತಿಕವಾಗಿ ಈಗಾಗಲೇ ಸಲ್ಲಿಕೆಯಾಗಿರುವ ವಲಸಿಗರ ವೀಸಾ ಅರ್ಜಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಉತ್ತರ ನೇಪಾಳದಲ್ಲಿ ಬುಧವಾರ ಮುಂಜಾನೆ ದಿಢೀರ್ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಗಡಿ ಭಾಗದ ಗ್ರಾಮಗಳು ಜಲಾವೃತಗೊಂಡಿದ್ದು, ಎಂಟು ಮಂದಿ ಸಾವನಪ್ಪಿದ್ದಾರೆ.
ಉತ್ತರಾಖಂಡದಲ್ಲಿ ಹಂದಿಜ್ವರದ ಸೋಂಕು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 1ರಿಂದ ಈವರೆಗೆ ರಾಜ್ಯದಲ್ಲಿ 49 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ.
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಆಸ್ಪತ್ರೆಯೊಂದರಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭಾರೀ ದುರಂತ ಸಂಭವಿಸಿದೆ.
ಭೀಕರ ಗಣಿ ದುರಂತ ಸಂಭವಿಸಿದ ಘಟನೆ ಮಧ್ಯ ಆಫ್ರಿಕಾ ಗಣರಾಜ್ಯದ ಪಶ್ಚಿಮ ಭಾಗದಲ್ಲಿ ನಡೆದಿದೆ. ಕನಿಷ್ಠ 30 ಚಿನ್ನದ ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಮೂಲದ ಲಕ್ಷ್ಮಿ ಮಿತ್ತಲ್ ಒಡೆತನದ ಉಕ್ರೇನ್ನ ಅತಿ ದೊಡ್ಡ ಉಕ್ಕು ಉತ್ಪಾದನಾ ಘಟಕವಾದ ಆರ್ಸಿಲರ್ ಮಿತ್ತಲ್ ಕ್ರಿವಿ ರಿಹ್ ಗೆ ಹಾನಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಗುತ್ತಿಗೆದಾರರು ಗಾಯಗೊಂಡಿದ್ದಾರೆ ಎಂದು Kyiv Post ವರದಿ ಮಾಡಿದೆ.
ಅಮೆರಿಕದ ಒಬ್ಬ ಸೈನಿಕನನ್ನು ಕೊಂದರೆ 30,000 ಡಾಲರ್ ಬಹುಮಾನ
ಆಫ್ರಿಕಾ ಖಂಡದ ಕಾಂಗೋ ದೇಶದಲ್ಲಿ ಎಬೋಲಾ ವೈರಸ್ ಸೋಂಕು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿನ ಸಂಖ್ಯೆ 2,000 ಗಡಿ ದಾಟಿದೆ.
ಡಿವೈಡರ್ ಹಾರಿ ಕಾರಿಗೆ ಪಿಕಪ್ ಟ್ರಕ್ ಡಿಕ್ಕಿಯಾದ ಪರಿಣಾಮ ಭಾರತೀಯ ಮೂಲದ ಟೆಕ್ಕಿ ಸಾವನ್ನಪ್ಪಿರುವ ಘಟನೆ ಅಮೆರಿಕದ ಒಹಾಯೊದಲ್ಲಿ ನಡೆದಿದೆ.
ಪಶ್ಚಿಮ ಕೊಲಂಬಿಯಾದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಸಾವಿನ ಸಂಖ್ಯೆ 132ಕ್ಕೆ ಏರಿಕೆಯಾಗಿದೆ.
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿದ್ದಾನೆ.