Showing 20 of 579 posts • Page 3 of 29
ಕ್ಯಾಲಿಫೋರ್ನಿಯಾದ ಬಿಗ್ ಪೈನ್ ಲೇಕ್ಸ್ ಪ್ರದೇಶದಲ್ಲಿ ವಾರಾಂತ್ಯದಲ್ಲಿ ಏಕಾಂಗಿ ಪಾದಯಾತ್ರೆ ವೇಳೆ ಕಾಣೆಯಾಗಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಾಂತಾ ಬಾರ್ಬರಾ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ.
ಯೆಮನ್ನ ಪಶ್ಚಿಮ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಹಡಗಿನ ಮೇಲೆ ದಾಳಿಯಾಗಿದೆ. ಸ್ಫೋಟಕಗಳಿಂದ ತುಂಬಿದ ದೋಣಿಯೊಂದು ಭಾರತೀಯ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗು ಮುಳುಗಿರುವ ಘಟನೆ ನಡೆದಿದೆ.
ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ಹಲವು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಅಮೆರಿಕ ಸೇನೆಯ ಸೆಂಟ್ರಲ್ ಕಮಾಂಡ್ ತಿಳಿಸಿದೆ.
ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಸಂಭವಿಸಿದ್ದ 7.1 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ 13 ಜನ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ಅವರು ಮಾಹಿತಿ ನೀಡಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ಭುಗಿಲೇಳುತ್ತಿದೆ.
ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ.
ಇರಾನ್ ಮೇಲಿನ ನಮ್ಮ ಯುದ್ಧ ಇನ್ನೂ ಮುಗಿದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿರುವ ಪಬ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನ ಸಾವನ್ನಪ್ಪಿದ್ದಾರೆ.
ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ ಹಲವಾರು ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.
ಬಹಾಮಾಸ್ನ ನಾರ್ತ್ ಆಂಡ್ರೋಸ್ನಲ್ಲಿ ಫ್ಲೆಮಿಂಗೊ ಏರ್ ಸೆಸ್ನಾ 402 ವಿಮಾನ ಪತನಗೊಂಡಿದೆ.
ಭಾರೀ ಪ್ರವಾಹದ ಸಮಯದಲ್ಲಿ ಸಂತಾನೋತ್ಪತ್ತಿ ಕೇಂದ್ರಗಳಿಂದ ಕನಿಷ್ಠ 900 ಹಾವುಗಳು ತಪ್ಪಿಸಿಕೊಂಡಿವೆ ಎಂದು ವರದಿಯಾದ ನಂತರ ಚೀನಾದ ಪ್ರವಾಹ ಪೀಡಿತ ಗುವಾಂಗ್ಕ್ಸಿ ಪ್ರದೇಶವು ಆತಂಕಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ.
ಈಶಾನ್ಯ ಇರಾನ್ನ ಮಶಾದ್ ಪಟ್ಟಣದಲ್ಲಿ ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆ ಶಿಯಾ ಧಾರ್ಮಿಕ ಸಂಪ್ರದಾಯದಂತೆ ನೆರವೇರಿತು.
ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಜೋಡಿ ಭೂಕಂಪಗಳ ದುರಂತದಿಂದಾಗಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 3,889 ಕ್ಕೆ ಏರಿಕೆಯಾಗಿದೆ.
ಆಗ್ನೇಯ ಚೀನಾದ ಜಿಂಜಿಯಾಂಗ್ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ ಶುರುವಾಗಿದೆ. ಅಮೇರಿಕ ಮತ್ತು ಇರಾನ್ ಮತ್ತೊಮ್ಮೆ ಮುಖಾಮುಖಿಯಾಗಿವೆ.
ಹಾರ್ಮುಜ್ ದಾಳಿಗೆ ಪ್ರತೀಕಾರವಾಗಿ ಇರಾನ್ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಭೀಕರ ದಾಳಿ ನಡೆಸಿದ್ದ ಅಮೆರಿಕ ಪಡೆಗಳು ಇಂದು ಮತ್ತೊಂದು ಸುತ್ತಿನ ದಾಳಿ ನಡೆಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಇಂಡೋನೇಷ್ಯಾದ ಐತಿಹಾಸಿಕ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿ , ತ್ರಿಮೂರ್ತಿಗಳಾದ ಶಿವ, ವಿಷ್ಣು ಮತ್ತು ಬ್ರಹ್ಮನಿಗೆ ಸಮರ್ಪಿತವಾದ ಸುಮಾರು 1,000 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು
ಪಾಕಿಸ್ತಾನದ ಕರಾಚಿ ಕರಾವಳಿಯ ಅರಬ್ಬಿ ಸಮುದ್ರದ ಬಳಿ ಭಾರಿ ಪ್ರಮಾಣದ ಸರಕು ಸಾಗಣೆ ಮಾಡುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದೆ.
ಇಂಡೋನೇಷ್ಯಾದಲ್ಲಿ ಐಐಎಂ ಬೆಂಗಳೂರಿನ ಮೊದಲ ಸಾಗರೋತ್ತರ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು
ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.