Showing 20 of 579 posts • Page 4 of 29
ಪ್ರಧಾನಿ ನರೇಂದ್ರ ಮೋದಿ ಅವರು ಸೀಶೆಲ್ಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದ್ದನ್ನು ಪ್ರಶ್ನಿಸಿದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರನ್ನು ಭಾರತ ಸೋಮವಾರ ತೀವ್ರವಾಗಿ ಟೀಕಿಸಿದೆ.
ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಭಾರತದ ಭವ್ಯ ಪರಂಪರೆಯನ್ನು ಇಲ್ಲಿನ ನೆಲದಲ್ಲಿ ವಿಸ್ತಾರವಾಗಿ ಪಸರಿಸುವ ನಿಟ್ಟಿನಲ್ಲಿ, ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿಗಳಾದ (ಡೆಪ್ಯುಟಿ ಚೀಫ್ ಆಫ್ ಮಿಷನ್) ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.
ಒಂದೇ ಒಂದು ತಪ್ಪು ಹೆಜ್ಜೆ ಇಟ್ಟರೂ ಇರಾನ್ ಸರ್ವನಾಶವಾಗಲಿದೆ ಎಂದು ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅಂತ್ಯಸಂಸ್ಕಾರದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾಗಿದ್ದ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಇರಾನ್ನಲ್ಲಿ ಆರಂಭವಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬಾಯಿಯ ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪ ಸಂಭವಿಸಿದ್ದು, ಪ್ರಕೃತಿಯ ಈ ವಿಕೋಪಕ್ಕೆ ಬಲಿಯಾದವರ ಸಂಖ್ಯೆ ಬರೋಬ್ಬರಿ 1,719ಕ್ಕೆ ಏರಿಕೆಯಾಗಿದೆ.
ಅಸ್ಸಾಂನ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪರಿಣಾಮ 22,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪೆಟ್ರೋಲ್ ಪಂಪ್ ಒಂದರಲ್ಲಿ ಕಾರಿನಲ್ಲಿದ್ದವರು ₹4,000 ಮೌಲ್ಯದ ಪೆಟ್ರೋಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿರುವ ಘಟನೆ ನಡೆದಿದೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ನಾಳೆ(ಜೂನ್ 22) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಯುಕೆ ಮಾಧ್ಯಮಗಳು ವರದಿ ಮಾಡಿವೆ.
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ವತಿಯಿಂದ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಆಯೋಜಿಸಲಾದ ಭವ್ಯ ‘ಸಂಭ್ರಮ 2026’ ಸಾಂಸ್ಕೃತಿಕ ಮಹೋತ್ಸವದಲ್ಲಿ, ಇಡೀ ಕತಾರ್ ಅನಿವಾಸಿ ಕನ್ನಡಿಗರ ಪರವಾಗಿ ಖ್ಯಾತ ಹಿನ್ನೆಲೆ ಗಾಯಕ ಹಾಗೂ “ಮೆಲೋಡಿ ಕಿಂಗ್” ಶ್ರೀ ರಾಜೇಶ್ ಕೃಷ್ಣನ್ ಅವರಿಗೆ ಪ್ರತಿಷ್ಠಿತ “ಸ್ವರ ಯೋಗಿ” ಗೌರವ ಬಿರುದು ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದೆ. ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು, 5 ಜನ ಮೃತಪಟ್ಟಿದ್ದಾರೆ.
ಇಲ್ಲಿನ ಉತ್ತರ ಭಾಗದಲ್ಲಿರುವ ಬೆಡ್ಫೋರ್ಡ್ ಪ್ರದೇಶದಲ್ಲಿ ಶುಕ್ರವಾರ ಎರಡು ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ರೈಲು ಚಾಲಕ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಟೋಕಿಯೋದ ಉತ್ತರದ ವಾರ್ಡ್ ಆದ ‘ಕಿಟಾ’ದಲ್ಲಿರುವ ನಾಲ್ಕು ಅಂತಸ್ತಿನ ‘ತಕಿನೊಗಾವಾ ನಂ. 3 ಪ್ರಾಥಮಿಕ ಶಾಲೆ’ಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನಿನ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಎರಡೂ ದೇಶಗಳ ನಡುವಿನ ದ್ವೇಷವನ್ನು ಕೊನೆಗೊಳಿಸುವುದು, ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದು ಮತ್ತು ನಿರ್ಬಂಧಗಳ ಪರಿಹಾರ ಮತ್ತು ಇರಾನ್ನ ಪರಮಾಣು ಕಾರ್ಯಕ್ರಮವನ್ನು ಒಳಗೊಂಡ ವಿಶಾಲ ಒಪ್ಪಂದದ ಕುರಿತು ಮಾತುಕತೆಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿರುವ 14 ಅಂಶಗಳ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದ್ದಾರೆ.
ಜಾರ್ಖಂಡ್ ರಾಜಧಾನಿ ರಾಂಚಿಯ ಆರ್ಎಸ್ಎಸ್ ಕಚೇರಿ ಮೇಲೆ ಮಧ್ಯರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.
ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ವೈರಲ್ ಕ್ಷಣವನ್ನು ಸೃಷ್ಟಿಸಿದರು, ಮೆಲೋನಿ ತಮಾಷೆಯಾಗಿ “ನಾವಿಬ್ಬರು ಇನ್ಸ್ಟಾಗ್ರಾಮ್ನಲ್ಲಿ ಅತ್ಯಂತ ಪ್ರಸಿದ್ಧ ” ಎಂದು ಹೇಳಿದರು.
ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಹನ್ನೊಂದು ಸ್ಕೈಡೈವರ್ಗಳು ಮತ್ತು ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬರೋಬ್ಬರಿ 600 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಮಸ್ಸೂರಿ ಬಳಿ ಸಂಭವಿಸಿದೆ.
ಅಫ್ಗಾನಿಸ್ತಾನ: ಪಾಕಿಸ್ತಾನವು ಗಡಿಯಲ್ಲಿ ಮತ್ತೆ ದಾಳಿ ಆರಂಭವಾಗಿದ್ದು, ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಕಳೆದ ರಾತ್ರಿ ಪಾಕಿಸ್ತಾನದ ಸೈನ್ಯವು ಮತ್ತೆ ನಮ್ಮ ವಾಯುಗಡಿಯನ್ನು ಉಲ್ಲಂಘಿಸಿದೆ. ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ನಾಗರಿಕ ಕಟ್ಟಡಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ 11 ಮಕ್ಕಳು ಹಾಗೂ ಒಬ್ಬ ಮಹಿಳೆ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. […]
ಖಾಸಗಿ ಜೆಟ್ ಒಂದು ಭೂಸ್ಪರ್ಶ ಮಾಡುವ ವೇಳೆ ಪತನಗೊಂಡು, ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಮೃತಪಟ್ಟಿರುವ ಘಟನೆ ರವಿವಾರ ಪೂರ್ವ ಡೊಮಿನಿಕನ್ ರಿಪಬ್ಲಿಕ್ ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.