Showing 20 of 579 posts • Page 9 of 29
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎರಡು ಡ್ರೋನ್ಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಈ ವೇಳೆ ಸಂಭವಿಸಿದ ಘಟನೆದಲ್ಲಿ ಭಾರತೀಯ ನಾಗರಿಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ದುಬೈ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.
ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಇಂದು 10ನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್ ನ ಸೇನಾಪಡೆ ಇರಾನ್ ನ ಪ್ರಮುಖ ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ವೈಮಾನಿಕ ಸೇರಿದಂತೆ ಪ್ರಬಲ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಮಿಸೈಲ್ಸ್ ಮತ್ತು ಡ್ರೋನ್ ದಾಳಿ ನಡೆಸಿತ್ತು.
‘ಶರಣಾಗದಿದ್ದರೆ ಇರಾನ್ ಮೇಲಿನ ಸೇನಾ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ. ಇದರ ಪರಿಣಾಮ ಘೋರವಾಗಿರುತ್ತದೆ. ಇರಾನ್ನ ಹೊಸ ನೆಲೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಯಲಿದೆ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಗುಡುಗಿದ್ದಾರೆ.
ದಕ್ಷಿಣ ಟೆಹ್ರಾನ್ನಲ್ಲಿರುವ ಇರಾನ್ನ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ಅಮೆರಿಕ ದಾಳಿ ಮಾಡಿದೆ.
ಇಂದು ಮುಂಜಾನೆ ಇರಾನ್ ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ನಂತರ ಇದೀಗ ಟೆಹ್ರಾನ್ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೊಡ್ಡ ಸ್ಫೋಟಗಳು ಮತ್ತು ಬೆಂಕಿ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಮಾಧ್ಯಮಗಳ ವರ್ತನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಸುದ್ದಿ ದೂರದರ್ಶನ ವಾಹಿನಿಗಳಿಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಗಳ (ಟಿಆರ್ಪಿ) ಪ್ರಕಟಣೆಯನ್ನು ನಾಲ್ಕು ವಾರಗಳ ಅವಧಿಗೆ ಸ್ಥಗಿತಗೊಳಿಸುವಂತೆ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (ಬಿಎಆರ್ಸಿ)ಗೆ ನಿರ್ದೇಶನ ನೀಡಿದೆ.
ಇಸ್ರೇಲ್-ಅಮೆರಿಕದ ಪ್ರತೀಕಾರದ ದಾಳಿಯ ನಡುವೆ ಇರಾನ್ ಹೊಸ ನಾಯಕನನ್ನ ಆಯ್ಕೆ ಮಾಡಿದೆ. ತಜ್ಞರ ಸಭೆಯು ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನ ಇರಾನ್ನ ಹೊಸ ಸರ್ವೋಚ್ಛ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಇರಾನ್ನ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್ನ ಆಸ್ಟಿನ್ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ ಮೂಲದವಳಾಗಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.
ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಭಾನುವಾರ ದಾಳಿ ನಡೆಸಿದೆ. ಇಸ್ರೇಲ್ ಕೇಂದ್ರ ಭಾಗದ ನಗರ ಬೆಟ್ ಶೆಮೆಷ್ ಮೇಲೆ ಇರಾನ್ ನಡೆಸಿದ ಕ್ಷಿಪಣಿಗಳ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಸಾವಿಗೀಡಾಗಿದ್ದು, ಯುದ್ಧದ ಭೀಕರತೆಗೆ ಹೊಸ ತಿರುವು ಕೊಟ್ಟಿದೆ.
ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಗಾರ್ಡಿಯನ್ ಕೌನ್ಸಿಲ್ನ ಧರ್ಮಗುರು ಅಯಾತೊಲ್ಲಾ ಅಲಿರೆಜಾ ಅರಾಫಿ ಅವರನ್ನು ಇರಾನ್ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಹಲವಾರು ಸುರಕ್ಷತಾ ಸಲಹೆಗಳ ಹೊರತಾಗಿಯೂ ಇರಾನ್ನಲ್ಲಿಯೇ ಉಳಿದುಕೊಂಡಿದ್ದ ಭಾರತೀಯ ವಿದ್ಯಾರ್ಥಿಗಳು ಈಗ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ತುರ್ತು ಸಹಾಯವನ್ನು ಕೋರುತ್ತಿದ್ದಾರೆ.
ಇರಾನ್ ಮೇಲೆ ಇಸ್ರೇಲ್, ಅಮೆರಿಕ ಜಂಟಿಯಾಗಿ ಯುದ್ಧ ಸಾರಿದ್ದು 30 ಕಡೆ ದಾಳಿ ನಡೆಸಿ ನಗರಗಳನ್ನ ಉಡೀಸ್ ಮಾಡಿದ್ವು. ಇದಕ್ಕೆ ಇರಾನ್ ಕೂಡ ಪ್ರತ್ಯುತ್ತರ ಕೊಟ್ಟಿದ್ದು ದೊಡ್ಡಣ್ಣನ ಸೇನಾ ನೆಲೆಗಳನ್ನೇ ಧ್ವಂಸ ಮಾಡಿದೆ. ಇದೀಗ ಇರಾನ್ನ ಸರ್ವೋಚ್ಛ ನಾಯಕನನ್ನೇ ಮಿತ್ರಪಡೆಗಳು ಹತ್ಯೆಗೈದಿವೆ. ಖಮೇನಿ ಸಾವಿನ ಬೆನ್ನಲ್ಲೇ ಇರಾನ್ ಹೊರ್ಮುಜ್ ಜಲಸಂಧಿ ಮುಚ್ಚಿದೆ.
ಅರೇಬಿಯನ್ ಸಮುದ್ರ ತೀರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಒಮಾನ್ ಕರಾವಳಿಯ ಸಮೀಪ ಪಲಾವ್ ಧ್ವಜ ಹೊತ್ತ ‘ಸ್ಕೈಲೈಟ್’ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದೆ.
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಸ್ಫೋಟದಲ್ಲಿ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇರಾನ್ ಮೇಲೆ ಇಸ್ರೇಲ್ – ಅಮೆರಿಕದಿಂದ ದಾಳಿ ನಡೆದ ಬಳಿಕ ಮದ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಖತರ್, ಕುವೈತ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಮ್ಮ ವಾಯುಪ್ರದೇಶಗಳನ್ನು ತಕ್ಷಣದಿಂದಲೇ ಮುಚ್ಚಿವೆ. ಭದ್ರತಾ ಪರಿಸ್ಥಿತಿಯನ್ನು ಉಲ್ಲೇಖಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು Al Jazeera ವರದಿ ಮಾಡಿದೆ.
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿಯಿಂದ ದುಬೈನಲ್ಲಿರೋ ಜನರು ಭಯಭೀತರಾಗಿದ್ದು, ದುಬೈ ಏರ್ಪೋರ್ಟ್ ಮೇಲೆ ಕೂಡಾ ದಾಳಿಗಳು ನಡೆದಿದ್ದು, ದುಬೈಗೆ ತೆರಳುವ ವಿಮಾನಗಳ ಹಾರಾಟವನ್ನ ರದ್ದುಗೊಳಿಸಲಾಗಿದೆ.
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಈ ಮೂಲಕ ಖಮೇನಿ ಹತ್ಯೆ ದೃಢಪಟ್ಟಿದೆ.
ಅಮೆರಿಕದಲ್ಲಿ ಭಾರಿ ಹಿಮಪಾತವಾಗಿದ್ದು 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.