ಯಾದಗಿರಿ: ಗುರುಮಠಕಲ್ ತಾಲೂಕಿನ ಫುಟಪಾಕ್ ಗ್ರಾಮದಲ್ಲಿ ದಾರುಣ ಘಟನೆ ನಡೆದಿದ್ದು, ಮಾದಿಗ ಸಮಾಜದ ಹಿರಿಯರಾದ ನರಸಪ್ಪ (ತಂದೆ ರಾಮಪ್ಪ ಊರಡಿ) ಅವರ ಮೇಲೆ ಅದೇ ಗ್ರಾಮದ ಮುಸ್ಲಿಂ ಸಮಾಜದ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಈ ದಾಳಿಯ ಪರಿಣಾಮವಾಗಿ ನರಸಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಜೀವಮರಣದ ಹೋರಾಟ ನಡೆಸುತ್ತಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು ನಾರಾಯಣಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೆ.ಬಿ. ವಾಸು ಅವರು ಸ್ಥಳಕ್ಕೆ ಭೇಟಿ ನೀಡಿ, ನರಸಪ್ಪ ಅವರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಅವರೋಂದಿಗೆ ಮಾತನಾಡಿದ ವಾಸು, ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿದರು.

ಈ ಘಟನೆಯು ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದು, ಸ್ಥಳೀಯರು ಆರೋಪಿಯ ಬಂಧನ ಹಾಗೂ ಈ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಪೊಲೀಸರ ಪ್ರತಿಕ್ರಿಯೆಗಾಗಿ ಕಾದು ನೋಡಬೇಕಾಗಿದೆ.

ವರದಿ- ಸುಧೀರ್ ಕೋಟಿ ಯಾದಗಿರಿ