ಯಾದಗಿರಿ : ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಕೂಲಿ ಕಾರ್ಮಿಕರ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ.

ಹೊಟ್ಟೆಪಾಡಿಗಾಗಿ ಕೂಲಿ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಭಾಗ್ಯಶ್ರೀ(35) ಸತ್ಯಮ್ಮ(30) ಹೊನ್ನಿಂಗಮ್ಮ(18) ಮೃತಪಟ್ಟವರು. ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಿನ ಜಾವವೇ ಕೂಲಿ ಕೆಲಸಕ್ಕೆ ಕಾರ್ಮಿಕರು ತೆರಳಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದುರಂತ ನಡೆದಿದೆ. ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ಕಾರ್ಮಿಕರು ತೆರಳಿದ್ದರು. ಬೊಲೆರೋ ವಾಹನದಲ್ಲಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ನೀಡಲಾಗ್ತಿದೆ. ಸ್ಥಳಕ್ಕೆ ಭೀ.ಗುಡಿ ಪಿಎಸ್ಐ ದೇವಿಂದ್ರರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೀ.ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೂವರು ಕೂಲಿ ಕಾರ್ಮಿಕರ ದುರ್ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.