ಯಾದಗಿರಿ : ಬೈಕ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಜೇವರ್ಗಿ ರಸ್ತೆ ಬಳಿ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸುರಪುರ ತಾಲೂಕಿನ ಚಾಮನಾಳ್ ಗ್ರಾಮದ ರಾಜು (31) ಹಾಗೂ ದೇವಿಂದ್ರ (22) ಮೃತ ದುರ್ದೈವಿಗಳು, ಮೃತರಿಬ್ಬರು ಸಹ ಖಾಸಗಿ ಬ್ಯಾಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇಬ್ಬರು ಸಹ ಕೆಲಸ ಮುಗಿಸಿಕೊಂಡು ಶಹಾಪುರದಿಂದ ಚಾಮನಾಳ್ ಗೆ ಹೋಗುತ್ತಿದ್ದರು. ಈ ವೇಳೆ ಕಲಬುರಗಿ ಕಡೆಯಿಂದ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ‌ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.