ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಾಜ್ಞೆ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್‌ರವರ ಜಯಂತಿ ಆಚರಣೆ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ 2026ರ ಎ.14ರ ಬೆಳಿಗ್ಗೆ 6 ಗಂಟೆಯಿಂದ ಎ.15ರ ಬೆಳಿಗ್ಗೆ 6 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎಲ್ಲಾ ತರಹದ ಮದ್ಯ ತಯಾರಿಕೆ, ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಯನ್ನು ನಿಷೇಧಿಸಿ ಹಾಗೂ ಶುಷ್ಕ ದಿನ ಬಾರ್ ಮತ್ತು ರೆಸ್ಟೋರೆಂಟ್ ಮುಚ್ಚುವಂತೆ ಆದೇಶಿಸಲಾಗಿದೆ.

